ಬೆಂಗಳೂರಿಗೆ ಉದ್ದಿಮೆ ಕಾರಿಡಾರ್: ಲಾಭ ಮಾತ್ರಾ ಚೆನ್ನೈಗೆ

ದಿಲ್ಲಿ-ಮುಂಬೈ ನಡುವೆ ಉದ್ದಿಮೆ ಕಾರಿಡಾರ್ ಯೋಜಿಸಿರೋ ಹಾಗೆ ದಕ್ಷಿಣ ಭಾರತದಲ್ಲೂ ಒಂದು ಉದ್ದಿಮೆ ಕಾರಿಡಾರ್ ಮಾಡೋ ಯೋಜನೆಗೆ ಕೇಂದ್ರ ಸರ್ಕಾರ ಮುಂದಾಗಿರೋ ಸುದ್ದಿ ನಮ್ಮ ಬೆಳವಣಿಗೆಗೆ ಅನುಕೂಲ ಮಾಡಿಕೊಡುತ್ತೆ ಗುರು. ಆದ್ರೆ ಈ ಕಾರಿಡಾರು ನಾಡಿಗೆ ಲಾಭ ತರ್ಬೇಕು ಅಂದ್ರೆ ಅದು ಚೆನ್ನೈ -ಬೆಂಗಳೂರು ಮಧ್ಯೆ ಅಲ್ಲಾ ಪುಣೆ - ಬೆಂಗಳೂರು ನಡುವೆ ಆಗಬೇಕು. ಅದೆಂಗಪ್ಪಾ ಅಂತ ವಸಿ ನೋಡ್ಮಾ ಬನ್ನಿ.

ಚೆನ್ನೈ-ಬೆಂಗಳೂರು ಕಾರಿಡಾರಿಗೆ ಹೂಂ ಅಂದ್ರೆ ಕನ್ನಡಿಗರ ಕೈಗೆ ಚಿಪ್ಪೇ ಗತಿ.
ಕೈಗಾರಿಕಾ ಕೇಂದ್ರವನ್ನಾಗಿ ಹೊಸೂರನ್ನು ಬೆಳೆಸಿದ ತಮಿಳುನಾಡು ಹತ್ತಿರದ ಬೆಂಗಳೂರಿನಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವೇ ಮುಂತಾದ ಸೌಕರ್ಯಗಳನ್ನು ಬಳಸಿಕೊಂಡೇ ಉದ್ಧಾರವಾಗಿ ಹೋಯಿತು. ಟೈಟಾನ್, ಅಶೋಕ್ ಲೈಲ್ಯಾಂಡ್, ಟಿವಿಎಸ್ ಮುಂತಾದ ಸಂಸ್ಥೆಗಳು ಅಲ್ಲಿ ಪ್ರಾರಂಭವಾದರೂ ಕನ್ನಡಿಗರಿಗೆ ಉದ್ಯೋಗಾವಕಾಶಗಳೂ ಗಿಟ್ಟಲಿಲ್ಲ, ಕರ್ನಾಟಕಕ್ಕೆ ಕಿಲುಬುಕಾಸಿನ ಆದಾಯವೂ ಹುಟ್ಟಲಿಲ್ಲ. ಅದಕ್ಕಿಂತ ಶೋಚನೀಯವಾದ ಸಂಗತಿಯೆಂದರೆ ಬೆಂಗಳೂರಿಗೆ ತಮಿಳರ ವಲಸೆ ಮತ್ತಷ್ಟು ಹೆಚ್ಚಾಯ್ತು ಅಷ್ಟೆ. ಈಗ ಯೋಜಿಸುತ್ತಿರುವ ಕಾರಿಡಾರ್ ಯೋಜನೆ ಕೂಡಾ ಹೆಸರಿಗೆ ಬೆಂಗಳೂರಿನಿಂದ ಚೆನ್ನೈ ತನಕ ಎಂದಿದ್ದರೂ ಈ ವಲಯ ಶೇಕಡಾ ನೂರರಷ್ಟು ಇರುವುದು ತಮಿಳುನಾಡಲ್ಲೇ. ಅತಿ ನಿರೀಕ್ಷಿತ ವಿದೇಶಿ ಬಂಡವಾಳ, ತೆರಿಗೆ, ಉದ್ಯೋಗಾವಕಾಶ, ಪೂರಕ ಉದ್ದಿಮೆಗಳು ಯಾವುದೂ ಕರ್ನಾಟಕಕ್ಕೆ ಗಿಟ್ಟದು. ಹಾಗಾಗಿ ಮೊಸರು ಮೂತಿಗೆ ಮೆತ್ತಿಸಿಕೊಂಡ ಮೇಕೆ ಆಗ್ತೀವಿ ಅಷ್ಟೆ.

ನಿಜವಾಗಿ ಆಗಬೇಕಾಗಿರೋದು ಬೆಂಗಳೂರು - ಪುಣೆ ಕಾರಿಡಾರು
ಕರ್ನಾಟಕದ ಅಧಿಕಾರಿಗಳು ಚರ್ಚೆ ಮಾಡ್ತಾ ಈ ಕಾರಿಡಾರನ್ನು ಬೆಳಗಾವಿವರೆಗೆ ವಿಸ್ತರಿಸಲು ಮನವಿ ಮಾಡ್ತಾರಂತೆ. ನಿಜ್ವಾಗ್ಲೂ ಕರ್ನಾಟಕ ಸರ್ಕಾರ ಚೆನ್ನೈ ಕಾರಿಡಾರಿನ ಬಗ್ಗೆ ಯಾವುದೇ ಆಸಕ್ತೀನೂ ತೋರುಸ್ದೆ, ದಕ್ಷಿಣ ಭಾರತಕ್ಕೆ ಕೊಡಮಾಡಲಿರುವ ಈ ಯೋಜನೆಯನ್ನು ತನ್ನದು ಮಾಡಿಕೊಳ್ಳಬೇಕು. ಕರ್ನಾಟಕದ ಹಿತ ಕಾಪಾಡಕ್ ಆಗೋದು ಇದ್ರಿಂದ ಮಾತ್ರ ಗುರು.

ಭಾರತಕ್ಕೂ ಲಾಭ ಇದ್ರಿಂದಲೇ...
ಈಗಾಗಲೇ ಯೋಜಿತವಾಗಿರೋ ದಿಲ್ಲಿ ಮುಂಬೈ ಕಾರಿಡಾರನ್ನು ಮುಂದೆ ವಿಸ್ತರಿಸುವ ಮೂಲಕ ಅದನ್ನು ದಿಲ್ಲಿ, ಮುಂಬೈ, ಬೆಂಗಳೂರು ಕಾರಿಡಾರ್ ಮಾಡಬೇಕು. ಆಟೋಮೊಬೈಲ್ ಕ್ಷೇತ್ರದಲ್ಲಿ ಟಾಟಾ, ಬಜಾಜ್, ಫೆರೋಡಿಯಾ ಬಜಾಜ್, ಕೈನೆಟಿಕ್ ತರಹದ ದೈತ್ಯ ಸಂಸ್ಥೆಗಳಿಗೆ ತವರಾಗಿರೋ ಪೂನಾ, ಅಲ್ಯುಮಿನಿಯಂ ತಯಾರಿಕೆ ಮತ್ತು ಅಚ್ಚು ಉದ್ದಿಮೆಗೆ ಹೆಸರಾದ ಬೆಳಗಾವಿ ಇದೇ ವಲಯದಲ್ಲಿ ಬರುತ್ತವೆ. ಉಕ್ಕು ತಯಾರಿಕೆಯ ತೋರಣಗಲ್ಲು, ಕರ್ನಾಟಕದ ಸುಮಾರು ಆರುನೂರು ಕಿಲೋಮೀಟರ್ ವ್ಯಾಪ್ತಿಯ ಅಕ್ಕಪಕ್ಕದಲ್ಲಿ ಬರುವ ಕಾರಿಡಾರ್ ಲಕ್ಷಾಂತರ ಕನ್ನಡಿಗರಿಗೆ ಉದ್ಯೋಗ ನೀಡಲಿದೆ. ನಾವು ಮೈಮರೆಯದೆ ಸದುಪಯೋಗ ಮಾಡಿಕೋಬೇಕು ಅಷ್ಟೆ. ಈ ವಲಯದ ಉದ್ದಕ್ಕೂ ನೀರಿನ ಸೌಕರ್ಯ ಕಲ್ಪಿಸಲು ಕಾವೇರಿ, ಕೃಷ್ಣಾ, ತುಂಗಭದ್ರಾ ನದಿಗಳಿವೆ. ಉತ್ತಮ ರೈಲು ಸಂಪರ್ಕವಿದೆ. ನಾಲ್ಕು ದಾರಿಗಳ ಹೆದ್ದಾರಿ ಇದೆ. ಬೆಳಗಾವಿ ಮತ್ತು ಬೆಂಗಳೂರುಗಳಲ್ಲಿ ವಿಮಾನ ನಿಲ್ದಾಣಗಳಿವೆ. ಉದ್ದಿಮೆ ಆರಂಭಿಸಲು ಬೇಕಾದ ಹಿತಕರವಾದ ವಾಯುಗುಣ ನಮ್ಮಲ್ಲಿ ಇದೆ. ಮೇಲಾಗಿ ನೈಸರ್ಗಿಕ ವಿಕೋಪಗಳ ಭೀತಿ ಕಡಿಮೆ ಇದೆ. ಈ ಎಲ್ಲ ವಿಷಯಗಳನ್ನು ಮುಂದಿಟ್ಟು ನಮ್ಮ ರಾಜ್ಯ ಸರ್ಕಾರ, ಜನಪ್ರತಿನಿಧಿಗಳು ಕೇಂದ್ರದ ಮೇಲೆ ಒತ್ತಡ ಹೇರಿ ಪುಣೆ-ಬೆಂಗಳೂರು ಉದ್ದಿಮೆ ಮೊಗಸಾಲೆಯ ಯೋಜನೆಯನ್ನು ಜಾರಿಗೆ ತರಲು ಮುಂದಾಗಬೇಕು. ಕೇಂದ್ರದ ಹಣಕಾಸು ಸಚಿವರಾದ ಪಿ.ಚಿದಂಬರಂ ಇಡಿಯ ಭಾರತಕ್ಕೆ ಹಣಕಾಸು ಸಚಿವರೆಂಬುದನ್ನು ನೆನಪು ಮಾಡಿಕೊಟ್ಟು ಬರುವ ಮುಂಗಡ ಪತ್ರದಲ್ಲಿ ಈ ಯೋಜನೆ ಘೋಷಿತವಾಗುವಂತೆ ಮಾಡಬೇಕು ಗುರು.

6 ಅನಿಸಿಕೆಗಳು:

Anonymous ಅಂತಾರೆ...

ಗುರುಗಳೆ, ಸರಿಯಗಿದೆ ನಿಮ್ಮ ವಾದ. ಯಾವಾಗ್ಲೂ ಕೇಂದ್ರವನ್ನು ಕುರಿಗಳ ತರ ಹಿಂಬಾಲಿಸುವ ನಮ್ಮ ಸರ್ಕಾರ ಈ ಸಲ ಕೇಂದ್ರದ ಯೋಜನೆಯನ್ನು ವಿರೋಧಿಸಿ ರಾಜ್ಯಕ್ಕೆ ಹಿತವಾಗುವ ಮುಂಬೈ-ಬೆಂಗಳೂರು ಕಾರಿಡಾರಿಗೆ ಬೆಂಬಲ ಸೂಚಿಸಿರುವುದು ಉತ್ತಮ ಬೆಳವಣಿಗೆ. ಈ ಕಾರಿಡಾರ್ ಅನುಷ್ಠಾನಗೊಂಡರೆ ೬೦೦ ಕಿ.ಮಿ.ಯಷ್ಟು ರಾಜ್ಯದ ಪ್ರದೇಶ ಇದರಿಂದ ಲಾಭ ಪಡೆಯಲಿದೆ. ಜೊತೆಗೆ ಬಳ್ಳಾರಿ-ಕೊಪ್ಪಳ ಜಿಲ್ಲೆಗಳ ಕಬ್ಬಿಣ-ಉಕ್ಕು ಉದ್ಯಮಗಳು ಹಾಗೂ ರಾಜ್ಯದ ಘಟ್ಟ ಮತ್ತು ಬಯಲು ಸೀಮೆಯ ಕೃಷಿ ಉದ್ಯಮಗಳು ಇದರಿಂದ ಲಾಭ ಪಡೆಯುತ್ತವೆ.

ಬೆಂಗಳೂರು-ಚೆನ್ನೈ ಹಾಗೂ ಬೆಂಗಳೂರು-ಕೋಯಿಮತ್ತೂರು-ಕೊಚ್ಚಿ ಕಾರಿಡಾರಿನಿಂದ ಆಗುವ ಲಾಭ ತಮಿಳುನಾಡು ಮತ್ತು ಕೇರಳಕ್ಕೆ ಮಾತ್ರ!! ನಾವು ಯಾವದಕ್ಕೂ ಮಣಿಯದೆ ಬೆಂಗಳೂರು-ಮುಂಬೈ ಕಾರಿಡಾರಿಗೆ ಮಾತ್ರ ಒಪ್ಪೋಣ.

Lohith ಅಂತಾರೆ...

Houdu Guru correct ag helidera.....Nam nadina janarege tumba anyaya agta ede....Kudale kendra sarkara idr bagye gamana haras beku....

Anonymous ಅಂತಾರೆ...

ಗುರು ಹೇಳಿದ ಹಾಗೆ, ಮುಂಬೈ ಬೆಂಗಳೂರು ಕಾರಿಡಾರ್ ನಮ್ಮ ರಾಜ್ಯಕ್ಕೆ ಉತ್ತಮ .
ಆದರೆ , ಚೆನ್ನೈ ಬೆಂಗಳೂರು ಕಾರಿಡಾರ್ ಕರುಣಾನಿಧಿಯ ಮೆಚ್ಚಿನ ಪ್ರಾಜೆಕ್ಟ್ .
ಅವರು ಈ ಪ್ರಾಜೆಕ್ಟ್ ಮಾಡಿಯೇ ತೀರುತ್ತಾರೆ .
ನಮ್ಮ ರಾಜ್ಯದ ರಾಜಕಾರಣಿಗಳು ಪ್ರತೀ ಸಲದ ಹಾಗೆ, ಇದರಲ್ಲೂ ಸೋಲುತ್ತಾರೆ .

Hopes illa..
:-(

Anonymous ಅಂತಾರೆ...

ee vishayavanna KRV avara gamanakke tarbeku. eega naditiro railway chaluvaliya haage idanne munduvarisbeku. illandre bengalooru kooda tamil nadige sero hage madbidtare..

Anonymous ಅಂತಾರೆ...

nenne taane naanu Mumbai - Delhi corridor bagge odidde. aadare chennai-bangalore corridor bagge gottiralilla.

houdu guru namage belagaum - bangalore corridor beke horatu chennai - hosur- bangalore corridor alla.

ram ಅಂತಾರೆ...

naavu belagavi-bengalooru mathu bellary-mangalooru industrial corridor annu start madabeku.... iddake kendrada permission togoluva agatyavilla... namm naadale namma boomi upayogisikondu maaduva yojanege horaginavara permissiongagi kaayabekilla

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails