ಕನ್ನಡ ಚಿತ್ರರಂಗದ ಸಮಸ್ಯೆ!

ಇದುವರೆಗೆ...

ದಕ್ಷಿಣ ಭಾರತೀಯ ಚಿತ್ರರಂಗದ ಬಗ್ಗೆ E&Y ಮತ್ತು FICCI ಒಂದು ವರದಿಯನ್ನು ಹೊರತಂದಿದ್ದು ಅದರಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ಇರುವ ಮಾಹಿತಿ ತಪ್ಪಾಗಿದ್ದು, ಉದ್ಯಮದ ಬೆಳವಣಿಗೆಗೆ ಮಾರಕವಾಗಿತ್ತು. ಈ ವರದಿಯನ್ನು ಚಿತ್ರರಂಗದ ಗಣ್ಯರ ಜೊತೆ ಬಳಗ ಹಂಚಿಕೊಳ್ಳಲು ಮುಂದಾಯಿತು. ಕರ್ನಾಟಕ ಚಲನಚಿತ್ರ ಅಕಾಡಮಿಯು ಇದರಲ್ಲಿ ಆಸಕ್ತಿ ತೋರಿ ಚಿತ್ರರಂಗದ ಎಲ್ಲಾ ಪ್ರಮುಖ ಕ್ಷೇತ್ರಗಳ ಪ್ರತಿನಿಧಿ ಸಭೆಯನ್ನು ಕರೆದು ವರದಿ ಬಗ್ಗೆ ಮಾಹಿತಿ ಹಂಚಿಕೊಂಡಿತು. ಆಗ ಸರಿಯಾದ ಮಾಹಿತಿ ನೀಡಲು ಸಮೀಕ್ಷೆಯನ್ನು ಮಾಡಲು ತೀರ್ಮಾನಿಸಲಾಯಿತು. ಬಳಗ ಮತ್ತು ಅಕಾಡಮಿಗಳು ಒಗ್ಗೂಡಿ ಏಳು ತಿಂಗಳು ಶ್ರಮಿಸಿ "ಕನ್ನಡ ಚಿತ್ರರಂಗ: ಒಂದು ಸಮೀಕ್ಷೆ" ಯನ್ನು ಹೊರತಂದವು.

ಸಮೀಕ್ಷೆಯ ಬಿಡುಗಡೆ ಮತ್ತು ಪ್ರತಿಕ್ರಿಯೆ!

ಸದರಿ ಸಮೀಕ್ಷೆಯನ್ನು ಅಕಾಡಮಿಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಬಿಡುಗಡೆ ಮಾಡಲಾಯ್ತು. ಸಮಿತಿಯ ಸಮೀಕ್ಷೆಯಲ್ಲಿ ಮೂಡಿಬಂದಿದ್ದ ಕೆಲ ಅಂಶಗಳ ಬಗ್ಗೆ ಕೆಲವರಿಂದ ವಿರೋಧ ಮೂಡಿಬಂದಿತು. ಹಾಗಾಗಿ ವರದಿಯನ್ನು ಅಕಾಡಮಿ ಹಿಂಪಡೆಯಿತು.

ಕನ್ನಡ ಚಿತ್ರರಂಗಕ್ಕೆ ಬೇಡವಾದ ಸತ್ಯ!

ಕನ್ನಡ ಚಿತ್ರರಂಗಕ್ಕೆ E&Y ಮತ್ತು FICCI ನೀಡಿದ ವರದಿಯ ಅಪಾಯದ ಬಗ್ಗೆಯಾಗಲೀ, ಆ ವರದಿಗೆ ಉತ್ತರ ನೀಡಬೇಕಾದ ಅಗತ್ಯದ ಬಗ್ಗೆಯಾಗಲೀ ಅರಿವಿದ್ದಂತಿಲ್ಲ. ಅಕಾಡಮಿ ಮತ್ತು ಬಳಗ ನಡೆಸಿದ ಸಮೀಕ್ಷೆಯಲ್ಲಿನ ಅಭಿಪ್ರಾಯಗಳನ್ನು ತೂಗಿ ನೋಡಬೇಕೆನ್ನುವ, ನಿಜಕ್ಕೂ ಚಿತ್ರರಂಗದ ಸಮಸ್ಯೆಗಳೇನು? ಎದುರಿಸಬೇಕಾದ ಸವಾಲುಗಳೇನು? ಎಂದು ಯೋಚಿಸಬೇಕೆಂಬ
ಮನಸ್ಥಿತಿ ಇರುವಂತೆಯೂ ಕಾಣಲಿಲ್ಲ. ಮುಂದೆ ಬರಲಿರುವ ದಿನಗಳು ತಮ್ಮ ಅಸ್ತಿತ್ವಕ್ಕೇ ಧಕ್ಕೆ ತಂದಾವು ಅದನ್ನು ಎದುರಿಸಲು ಒಂದಾಗಿ ಯೋಚಿಸೋಣ ಎನ್ನುವ ಅರಿವೂ ಕಾಣಲಿಲ್ಲ.

ಚಿತ್ರರಂಗದ ಮುಂದಿರುವ ಸವಾಲು!

ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಪರಭಾಷಾ ಚಿತ್ರಗಳ ಬಿಡುಗಡೆಗೆ ವಿಧಿಸಿರುವ ಪ್ರಿಂಟ್ ಸಂಖ್ಯೆಯ, ಏಳುವಾರದ ಗಡುವಿನ ಒಪ್ಪಂದಕ್ಕೆ ಕವಡೆ ಕಿಮ್ಮತ್ತೂ ಇರುವುದಿಲ್ಲ. ಇದರಿಂದಾಗಿ ಕರ್ನಾಟಕದ ಮೂಲೆ ಮೂಲೆಯಲ್ಲಿ ತಮಿಳು, ತೆಲುಗು, ಇಂಗ್ಲೀಷ್, ಹಿಂದೀ ಇತ್ಯಾದಿ ಚಿತ್ರಗಳು ರಾರಾಜಿಸುವುದರ ಜೊತೆಯಲ್ಲೇ ಇಡೀ ಕನ್ನಡ ಜನತೆ ನಿಧಾನವಾಗಿ ಕನ್ನಡ ಚಿತ್ರಗಳಿಂದ ದೂರವಾಗುವ ಸಾಧ್ಯತೆಗಳು ಕಾಣುತ್ತಿವೆ. ರಾಷ್ಟ್ರೀಯ ಅಂತರರಾಷ್ಟ್ರೀಯ ಸಮಿತಿಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಕನ್ನಡ ಚಿತ್ರರಂಗದ ಪ್ರತಿನಿಧಿಗಳಿಗೆ ಕವಡೆ ಕಾಸಿನ ಕಿಮ್ಮತ್ತೂ ಈಗಲೇ ಇಲ್ಲದಂತಾಗಿದೆ. ಇದು ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಕನ್ನಡ ಚಿತ್ರರಂಗದ ಸದಸ್ಯರನ್ನು ಒಮ್ಮೆಗೇ ಅಮಾನತ್ತು ಗೊಳಿಸಿದಾಗ ಸಾಬೀತಾಗಿದೆ. ಗೋವಾ ಚಿತ್ರೋತ್ಸವದಲ್ಲಿ ಆಗುತ್ತಿರುವ ಅಪಮಾನಗಳಿಗಂತೂ ಲೆಕ್ಕವೇ ಇಲ್ಲ. ಪಾಲಿಸಿ ಮಾಡುವಾಗ ನಮ್ಮವರ ಮಾತಿಗೆ ಸರ್ಕಾರ ಯಾಕಾದರೂ ಬೆಲೆ ಕೊಟ್ಟೀತು. "ನಾವು ತೆಗೆಯೋ ಚಿತ್ರಗಳ ರಿಮೇಕೆಂಬ ಎಂಜಲು ತಿನ್ನುವವವರು ನೀವು" ಎನ್ನುವ ಅವಹೇಳನ ಅದೆಷ್ಟು ಕಡೆ ತಾನೇ ಆಗಿಲ್ಲ. ನಮ್ಮ ಚಿತ್ರರಂಗ ಉದ್ಧಾರವಾಗಲು ಇದೀಗ ಗಂಭೀರವಾಗಿ ಚಿಂತಿಸಲು ಸಕಾಲ.

ಏನೇನಾಗಬೇಕು?

ಕನ್ನಡ ಚಿತ್ರರಂಗದಲ್ಲಿ ಹೊಸಬರ, ಹೊಸತನದ ಚಿತ್ರಗಳು ತಯಾರಾಗಬೇಕಾಗಿದೆ. ವೃತ್ತಿಪರತೆ ಹೆಚ್ಚಾಗಬೇಕಿದೆ. ಪ್ರತಿಭಾ ಶೋಧ, ತರಬೇತಿಗಳಿಗೆ ಗಮನ ಕೊಡಬೇಕಾಗಿದೆ. ಹಣಕಾಸು ವ್ಯವಸ್ಥೆಯೂ ಮೀಟರ್ ಬಡ್ಡಿ ರೂಪದಲ್ಲಿ ಹರಡಿಕೊಂಡಿರುವುದು ನಿಂತು ಸಂಸ್ಥಾ ಹಣಕಾಸು ವ್ಯವಸ್ಥೆಗೆ ಸಾಗಬೇಕಿದೆ. ತಯಾರಿಕೆಯ ವೆಚ್ಚ ಕೆಟ್ಟ ಯೋಜನೆಯಿಂದಾಗಿ ಹೆಚ್ಚಾಗದಂತೆ ಸಿನಿಮಾ ನಿರ್ಮಾಣದ ತರಬೇತಿಗಳು ನಡೆಯಬೇಕಾಗಿದೆ. ಚಿತ್ರಮಂದಿರಗಳ ಅವ್ಯವಸ್ಥೆ, ಟಿಕೆಟ್ ಮಾರಾಟದಲ್ಲಿನ ಹುಳುಕುಗಳನ್ನು ಇಲ್ಲವಾಗಿಸಬೇಕಾಗಿದೆ. ವಿತರಕ, ಪ್ರದರ್ಶಕ, ನಿರ್ಮಾಪಕರ ನಡುವೆ ಯೋಗ್ಯವಾದ ರೀತಿಯಲ್ಲಿ ಲಾಭ ಹಂಚಿಕೆ, ಕಾರ್ಮಿಕರಿಗೆ ಗುಂಪುವಿಮೆ ಮೊದಲಾದ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಕನ್ನಡ ಚಿತ್ರಗಳ ಮಾರುಕಟ್ಟೆಗಳನ್ನು ನಾಡಿನೊಳಗಡೆ ಗಟ್ಟಿಮಾಡಿಕೊಳ್ಳಬೇಕಾಗಿದೆ. ಹೊರರಾಜ್ಯಗಳಲ್ಲಿ, ಹೊರದೇಶಗಳಲ್ಲಿ ಮಾರುಕಟ್ಟೆ ಕಟ್ಟಿಕೊಳ್ಳಬೇಕಾಗಿದೆ. ಅಂತರ್ಜಾಲ, ಆಡಿಯೋ ವೀಡಿಯೋ ಮಾರುಕಟ್ಟೆಗಳನ್ನು ಉಪಯೋಗಿಸಿಕೊಳ್ಳಬೇಕಾಗಿದೆ. ಪುಟ್ಟ ಪುಟ್ಟ ಚಿತ್ರಮಂದಿರಗಳನ್ನು ರಾಜ್ಯದ ಎಲ್ಲೆಡೆ ಕಟ್ಟುವ ಮೂಲಕ ಚಿತ್ರಮಂದಿರಗಳ ಕೊರತೆ ನೀಗಿಸಬೇಕಾಗಿದೆ. ಹೀಗೆ... ಮಾಡಲು ಹತ್ತಾರು ಕೆಲಸಗಳಿವೆ. ಇದನ್ನು ಬಿಟ್ಟು ಗತವೈಭವದಲ್ಲೇ ತೇಲಾಡಿಕೊಂಡು ಇರ್ತೀವಿ, ಕಾನೂನು ಬಾಹಿರವೂ ನ್ಯಾಯಬಾಹಿರವೂ ಆದ ಮಾರ್ಗದಲ್ಲಿ ಸ್ಪರ್ಧೆ ತಡೀತೀನಿ ಎನ್ನುವ ಮನಸ್ಥಿತಿಯಿಂದ ಹೊರಬರಬೇಕಾಗಿದೆ.

ಕನ್ನಡ ಚಿತ್ರರಂಗವು ಕೆಲವು ಸ್ವಹಿತಾಸಕ್ತಿಯ ನಾಯಕರ ಮಾತುಗಳಿಗೆ ಮರುಳಾಗದೆ ಇಡೀ ಚಿತ್ರರಂಗದ ನಾಳೆಗಳ ಬಗ್ಗೆ ಒಂದು ಆರೋಗ್ಯಕರವಾದ ಚರ್ಚೆಗೆ ತನ್ನನ್ನು ತಾನು ತೆರೆದುಕೊಂಡಿದ್ದರೆ ಕನ್ನಡ ಚಿತ್ರರಂಗಕ್ಕೆ ಒಳ್ಳೆಯ ಭವಿಷ್ಯವನ್ನು ರೂಪಿಸಿಕೊಳ್ಳಲು ಅವಕಾಶವಾದರೂ ಇದೆ ಅನ್ನಿಸುವುದಿಲ್ಲವೇನು? ಕರ್ನಾಟಕದಲ್ಲಿ ಕನ್ನಡಿಗರ ಮನರಂಜನೆಯು ಕನ್ನಡದಲ್ಲೇ ಇರಬೇಕಾದ್ದು ಕನ್ನಡಿಗರು ಹಕ್ಕು ಎಂಬುದನ್ನೂ, ಈಗಿರುವಂತೆಯೇ ಪರಭಾಷಾ ಚಿತ್ರಗಳು ಆಯಾ ಭಾಷೆಗಳಲ್ಲೇ ಕನ್ನಡ ನಾಡಿನ ಹಳ್ಳಿಹಳ್ಳಿಗಳಲ್ಲಿ ನಡೆಯುವುದು ಮುಂದಾದರೆ ಮುಂದೊಂದು ದಿನ ಕರ್ನಾಟಕದಲ್ಲಿ ಕನ್ನಡವೆಲ್ಲಿ ಉಳಿದೀತು? ಕನ್ನಡ ಚಿತ್ರರಂಗವೆಲ್ಲಿ ಉಳಿದೀತು? ಅನಿಸುವುದಿಲ್ಲವೇ?

4 ಅನಿಸಿಕೆಗಳು:

Free Kannada movies ಅಂತಾರೆ...

Nijavaada simple secret enandare .. Hindi/tamil/telugu navaru english ninda directagi kathe/effects/music na ettuttare (dubb maaduttare) .. namma kannada davarige adu innu artha aagilla, tamilu/telgu inda dubb maadodralle iddare ..

Kannada davaru directagi International market (english) movies ninda kalitu beleya beku .. kongara movie dub maaduva badlu ..

uppittu ಅಂತಾರೆ...

@Free Kannada movies, neevu heluttiruvudu 100% correct. Telugu bittaki awra movies waste awrige swalpanu standard illa just cuz their audience are movie buffs there movies are successful. But newu heliddu tamil mattu hindi ge tumba anvayisutte. swalpa story line tagondu style ella english inda copy hoditaare.
Infact kannadadalli tamil ninda alla telugu inda jasti remake madutidare ittichege. adakke 1% kathe illada savari tharada movies baruttiruvudu. puneet movies uu telugu bhashe ondilla ashte full telugu movie ne.
nammalli style improve madikolluvudakke adu hindi mattu tamil nalli baruvavaregu kaayuttiruttaare. alli banda takshana illu adu kanutte.
aadare english ninda copy hodeyuvudakku ondu chaanakshatana irabeku ellarigu copy agalla. Look at crazy kutumba english inda ettiddu but niroopane ashtu chenagi bandilla. Also uttara karnatakada janatege swalpa offensive agi tegedidare.

gurugale, neevu kotta varadiyallidda yaava amshagalu chitrarangadavarige ishtavaagilla? adara bagge swalpa vivarane koduteera? anda haage neevu FICC ya varadiyannu khandisi nimma varadi tayaaru madiddu taane? matte adaralliruvudannu chitrarangadavaru oppade iruvudakke enu karana?

Unknown ಅಂತಾರೆ...

Enadru maadi guru Kannada & Kannada chitrarangavannu ulisi. EEgina trend nodidre bhaya aaguthe. Kannada chitra noduvudu irali, Kannada maathadodu kasta aagide. Naavu nimma jothegiddeve. Kannada ulisi, Kannada belesi.

Anonymous ಅಂತಾರೆ...

ಕನ್ನಡ ಚಿತ್ರರಂಗದವರಿಗೆ ಕೆಟ್ಟ ಮೇಲೂ ಬುದ್ದಿ ಬರಲ್ಲ. ಎಲ್ಲಿಯ ತನಕ ವಿಜಯ್, ಯೋಗಿ ತರದೋರು ಹೀರೋ ಆಗೋದು ನಿಲ್ಲಿಸ್ತಾರೋ ಅಲ್ಲಿ ವರೆಗೂ ಕನ್ನಡ ಚಿತ್ರರಂಗ ಉದ್ದಾರ ಆಗಲ್ಲ. ಒಂದು ಒಳ್ಳೆ ಕಥೆ, ಒಂದೆರಡು ಒಳ್ಳೆ ಹಾಡು, ಒಂದಿಷ್ಟು ಹಾಸ್ಯ ಇದ್ದರೆ ಚಿತ್ರ ಖಂಡಿತ ಸೂಪರ್ ಹಿಟ್. ತಮಿಳು, ತೆಲುಗು ಭಾಷೆಗಳು ತಮ್ಮ ಭಾಷೆ ವಿಸ್ತಾರ ಮಾಡ್ತಾ ಇರೋದ್ರಲ್ಲಿ ಅವರ ಚಿತ್ರರಂಗ ಬಹಳ ಪರಿಣಾಮಕಾರಿಯಾಗಿದೆ. ಆ ಚಿತ್ರರಂಗದವರು ತಮ್ಮ ಚಿತ್ರಗಳು ಸಮುದ್ರ, ಸಾಗರಗಳು(ಅಮೆರಿಕ, ಬ್ರಿಟನ್, ಸಿಂಗಪೋರ್, ಮಲೇಶಿಯ, ಜಪಾನ್, ಆಸ್ಟ್ರೇಲಿಯಾ, ಕೆನಡ) ದಾಟುವಂತೆ ಮಾಡಿದ್ದಾರೆ. ನಮ್ಮ ಚಿತ್ರರಂಗದವರು ಇನ್ನೂ ನಮ್ಮ ರಾಜ್ಯದ ಗಡಿ ದಾಟಿಸೋಕೂ ಪರದಾಡ್ತಾ ಇದಾರೆ. ಕನ್ನಡಿಗರೇ ಹೆಚ್ಚಾಗಿ ವಾಸ ಮಾಡುವಂಥಹ ಹೊಸೂರು, ಕಾಸರಗೋಡು, ಸೊಲ್ಲಾಪುರ, ಮಡಕಸಿರ, ಗೋವಾ, ತಾಳವಾಡಿ, ಆದೋನಿ, ಸತ್ಯಮಂಗಲ ದಂಥ ಊರಲ್ಲಿ ಸಹ ಕನ್ನಡ ಚಿತ್ರ (ಕೆಲವು ಕಡೆ ಕನ್ನಡ ಟೀವೀ ವಾಹಿನಿ ಕೂಡ ) ಪ್ರಸಾರ ಆಗೋದಿಲ್ಲ ಅಂದರೆ ಕನ್ನಡ ಚಿತ್ರರಂಗ ಎಷ್ಟು ಕಳಪೆ ಆಗಿದೆ ಅನ್ನೋದಕ್ಕೆ ಸಾಕ್ಷಿ. ಅಷ್ಟೇಕೆ ಬೆಂಗಳೂರು, ಮೈಸೂರು, ಮಂಗಳೂರು, ಕೋಲಾರ, ಬೆಳಗಾವಿ, ಗುಲಬರ್ಗ, ಬಳ್ಳಾರಿ, ಕಾರವಾರ, ದಾವಣಗರೆ, ಹುಬ್ಬಳ್ಳಿ, ಬೀದರ ದಂಥಹ ನಗರ ಪ್ರದೇಶದ ಜನರೇ ಇತ್ತೀಚಿಗೆ ಕನ್ನಡ ಚಿತ್ರ ನೋಡ್ತಾ ಇಲ್ಲ. ಬೇರೆ ಭಾಷೆಗಳಾದ ಹಿಂದಿ, ತೆಲುಗು, ತಮಿಳು, ಭಾಷೆ ಚಿತ್ರಗಳನ್ನ ಹೆಚ್ಚಾಗಿ ನೋಡ್ತಾ ಇದಾರೆ. ಮುಂಚೆ ಮಹಾನಗರಗಳಿಗಷ್ಟೆ ಸೀಮಿತ ವಾಗಿದ್ದ ಪರಭಾಷಾ ಚಿತ್ರಗಳು ಈಗ ತಾಲೂಕು ಕೇಂದ್ರಗಳಿಗೂ, ಹೋಬಳಿ ಗಳಿಗೂ, ಮಂಡಲ ಗಳಿಗೂ ದಾಳಿ ಇಟ್ಟಿವೆ. ಇಷ್ಟೆಲ್ಲಾ ಅನಾಹುತ ನಡೆದರೂ ಎಚ್ಚೆತ್ತು ಕೊಳ್ಳಲಿಲ್ಲ ಅಂದ್ರೆ ಕನ್ನಡ ಚಿತ್ರರಂಗ ಸದ್ಯದಲ್ಲೇ ಎಳ್ಳು ನೀರು ಬಿಟ್ಟು ಕೊಳ್ಳಲಿದೆ.

ವರದಿಗಾಗಿ ಏನ್ಗುರು ಬಳಗ ಶ್ರಮಿಸಿದ್ದಕ್ಕಾಗಿ ಅಭಿನಂದನೆಗಳು.

ನಿಮ್ಮ ಅನಿಸಿಕೆ ಬರೆಯಿರಿ

"Anonymous" ಆಗಬೇಡಿ, ಯಾವುದಾದರೂ ಒಂದು ಹೆಸರಿಟ್ಟುಕೊಂಡು ಸೋಮಾರಿತನವನ್ನು ಎದುರಿಸಿ!

Related Posts with Thumbnails