ಸರಸ್ವತಿ ಸಮ್ಮಾನಕ್ಕೆ ಪಾತ್ರರಾದ ಶ್ರೀ ಎಸ್.ಎಲ್. ಭೈರಪ್ಪನವರ ಒಂದು ಸಂದರ್ಶನ ಕನ್ನಡಪ್ರಭ ದಿನಪತ್ರಿಕೆಯಲ್ಲಿ ಪ್ರಕಟವಾಗಿದೆ. (ಫೋಟೋ ಕೃಪೆ: http://simhasn.blogspot.com/) ಸಂದರ್ಶನ ನಡೆಸಿರುವ ಶ್ರೀ ಶತಾವಧಾನಿ ಗಣೇಶ್ ಅವರು ಕೇಳಿದ ಪ್ರಶ್ನೆಗಳಿಗೆ ಶ್ರೀ ಭೈರಪ್ಪನವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಮೊನ್ನೆ ಪಾರಿಭಾಷಿಕ ಪದಗಳ ಬಗ್ಗೆ ಭೈರಪ್ಪನವರು ಹೊಂದಿರುವ ನಿಲುವಿನ ಬಗ್ಗೆ ಮಾತಾಡಿದ್ದೆವು. ಇದೀಗ ಭೈರಪ್ಪನವರು ಪಾರಿಭಾಷಿಕ ಪದಗಳ ಬಗ್ಗೆ ತಮ್ಮ ಅನಿಸಿಕೆ ಹೇಳಲು ಪ್ರೇರೇಪಿಸಿದ ಪ್ರಶ್ನೆ ಮತ್ತು ಅದಕ್ಕೆ ನೀಡಿದ ಉತ್ತರದಲ್ಲಿನ ಮತ್ತೊಂದು ಮಹತ್ವದ ನಿಲುವಿನ ಬಗ್ಗೆ ಮಾತಾಡೋಣ.
ಪ್ರಶ್ನೆಯಲ್ಲೇ ಉತ್ತರ ತುಂಬಿ ಕೇಳುವ ಕಲೆ!
ಹೌದು! ಈ ಪ್ರಶ್ನೆಗೆ ಭೈರಪ್ಪನವರು ನೀಡಿದ ಉತ್ತರದ ಬಗ್ಗೆ ಮಾತಾಡುವುದಕ್ಕೂ ಮುನ್ನ ಪ್ರಶ್ನೆಯ ಒಳಮರ್ಮದತ್ತ ನೋಡೋಣ. ಶ್ರೀ ಶತಾವಧಾನಿ ಗಣೇಶ್ ಅವರು ಹೀಗೆ ಪ್ರಶ್ನೆ ಕೇಳಿದ್ದಾರೆ:
ಭೈರಪ್ಪನವರ ನಿಲುವು ಹುಟ್ಟು ಹಾಕಿದ ಪ್ರಶ್ನೆಗಳು!
ಭೈರಪ್ಪನವರು ಈ ಪ್ರಶ್ನೆಗೆ ಉತ್ತರಿಸುವಾಗ ಸ್ವಲ್ಪ ತಡವರಿಸಿ ಉತ್ತರವನ್ನು ಸುತ್ತಿ ಬಳಿಸಿ ನೀಡಲು ಯತ್ನಿಸಿರುವುದು ಕಾಣುತ್ತದೆ ಮತ್ತು ಈ ಉತ್ತರ ನೀಡುವ ಭರದಲ್ಲಿ ಅನೇಕ ತಪ್ಪು ಮಾಹಿತಿಗಳನ್ನು ನೀಡಿರುವುದು ತಿಳಿಯುತ್ತದೆ. ಹೇಗೆಂದು ನೋಡೋಣ...
> ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕರನ್ನು ಕೇಂದ್ರವಾಗಿಸಿಕೊಂಡು ಹುಟ್ಟಿದ್ದು... ಶಿವಸೇನಾ. ಮರಾಠಿ ಕೇಂದ್ರಿತ ರಾಜಕೀಯ ಯುಗ ಆರಂಭವಾದದ್ದು ೧೯೬೬ರಲ್ಲೇ. ಮುಂದೆ ಅದು ಎಂ.ಇ.ಎಸ್, ಮಹಾರಾಷ್ಟ್ರಾ ನವನಿರ್ಮಾಣ ಸೇನೆಯ ಉದಯದವರೆಗೂ ಸಾಗಿ ಬಂದಿದೆ.
> ಪಂಜಾಬ್ ಪ್ರಾಂತ್ಯದಲ್ಲಿ ಖಲೀಸ್ಥಾನದ ಬೇಡಿಕೆ, ಆ ಒಂದು ರಕ್ತಸಿಕ್ತ ಹೋರಾಟದ ಚಳವಳಿ, ಆನಂದ್‌ಪುರ್ ಸಾಹೇಬ್ ನಿರ್ಣಯವಾದ ಪ್ರತ್ಯೇಕ ಖಾಲಿಸ್ತಾನದ ಘೋಷಣೆಯೂ ಪಂಜಾಬಿ ಪ್ರಾಂತೀಯತೆಯ ಅಭಿವ್ಯಕ್ತಿಗಳೇ ಅಲ್ಲವೇ?
> ತನ್ನದೇ ಆದ ನುಡಿ, ಸಂಸ್ಕೃತಿಗಳನ್ನು ಹೊಂದಿರುವ ಯಾವ ಪ್ರಾಂತ್ಯವೂ ತನ್ನ ಭಾಷೆ, ಸಂಸ್ಕೃತಿಗಳ ಬಗ್ಗೆ ಹೆಮ್ಮೆ ಪಟ್ಟುಕೊಳ್ಳುವುದನ್ನೂ, ತನ್ನ ಬೇರನ್ನು ಅದರಲ್ಲೇ ಗುರುತಿಸಿಕೊಳ್ಳುವುದನ್ನೂ ಬಿಡುವುದಿಲ್ಲಾ ಎನ್ನಲು ಕಟ್ಟಾ ರಾಷ್ಟ್ರೀಯವಾದದ ಬಿಜೆಪಿಯ ಗುಜರಾತಿನ ಮುಖ್ಯಮಂತ್ರಿಗಳಾದ ಶ್ರೀ ನರೇಂದ್ರಮೋದಿಯವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಳಸಿದ್ದ "ಗುಜರಾತಿ ಅಸ್ಮಿತಾ" ಘೋಷಣೆಯೇ ಸಾಕ್ಷಿಯಾಗಿದೆ. ಮತ್ತಿದು ಸರಿಯಾಗೂ ಇದೆ.
> ಬೆಂಗಾಲಿಗಳ ಭಾಷೆ ಸಂಸ್ಕೃತಿಗಳ ಅಭಿಮಾನವಂತೂ ವಿಶ್ವವಿಖ್ಯಾತ. ರವೀಂದ್ರನಾಥರ ಸೋನಾರ್ ಬಾಂಗ್ಲಾ ಆಗಲೀ, ಬಂಕಿಮರ ವಂದೆಮಾತರಂ ಆಗಲೀ ಬಂಗಾಳಿ ಸಂಸ್ಕೃತಿಯ ಅಭಿವ್ಯಕ್ತಿಯೇ ಅಲ್ಲವೇನು?
ಇವೆಲ್ಲಾ ಒಂದು ಕಡೆಯಿದ್ದು ಮತ್ತೊಂದೆಡೆ ಪ್ರಾದೇಶಿಕ ಚಿಂತನೆಗಿಂತಾ ಮಿಗಿಲಾಗಿ ರಾಷ್ಟ್ರೀಯತೆಯ ಚಿಂತನೆಯೊಂದಿಗೇ ಕೈಗೂಡಿಸಿದ ಕನ್ನಡನಾಡಿನಲ್ಲಿ ಪ್ರಾದೇಶಿಕ ಚಿಂತನೆ ಮೂಡುವುದರ ಬಗ್ಗೆ ಗಣೇಶ್ ಮತ್ತು ಭೈರಪ್ಪನವರು ಎತ್ತಿದ ಆಕ್ಷೇಪದ ಮಾತುಗಳೇಕೋ ಉಚಿತವಾದುದಲ್ಲ ಅನ್ನಿಸುತ್ತದೆ. ಗಮನಿಸಿ ನೋಡಿ, ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದವರಲ್ಲಿ ಹೆಚ್ಚಿನವರೆಲ್ಲಾ ಈ ಮೇಲಿನ ಪ್ರದೇಶಗಳ ಜನರೇ ಆಗಿದ್ದಾರೆ. ಹಾಗಾದರೆ ಪ್ರಾದೇಶಿಕ ಚಿಂತನೆ ರಾಷ್ಟ್ರೀಯತೆಗೆ ಮಾರಕವಾಗುವುದಾದರೂ ಹೇಗೆ? ಕನ್ನಡಿಗರಿಗೆ ಕರ್ನಾಟಕತ್ವ ಎನ್ನುವುದೇ ಭಾರತೀಯತೆ ಅಲ್ಲವೇ? ಆಲೂರು ವೆಂಕಟರಾಯರ ಮಾತು "ಕರ್ನಾಟಕಾಂತರ್ಗತ ಭಾರತಮಾತೆ" ಎನ್ನುವುದನ್ನು ಅರಿತರೆ ಪ್ರಾದೇಶಿಕತೆ ಮತ್ತು ಭಾರತೀಯತೆಗಳೆರಡೂ ಒಂದೇ ಎನ್ನುವುದು ಅರಿವಾಗುತ್ತದೆ.
ಮುಂದುವರೆಯುತ್ತಾ ಭೈರಪ್ಪನವರು ಈ ಭಾವನೆಗೆ ಕಾರಣವನ್ನು ಸಂಸ್ಕೃತ ದ್ವೇಷ/ ವೇದದೆಡೆಗಿನ ದ್ವೇಷ/ ಪರಭಾಷಿಕರ ಪ್ರಾಬಲ್ಯಗಳಿಗೆ ಆರೋಪಿಸುತ್ತಾರೆ. ಆಂಗ್ಲರು ಭಾರತವನ್ನು ಒಡೆಯಲು ಬಳಸಿದ್ದ ತಂತ್ರಗಳ ಫಲ ಎಂದಿದ್ದಾರೆ. ವೈಜ್ಞಾನಿಕವಾಗಿ ಭಾಷಾ ವಿಜ್ಞಾನಿಗಳು ಗುರುತಿಸಿರುವ ದಿಟವಾದ ‘ಕನ್ನಡದ ಬೇರುಗಳು ಸಂಸ್ಕೃತದಲ್ಲಿಲ್ಲ’ ಎಂಬುದನ್ನು ಶ್ರೀಯುತರೂ ಒಪ್ಪುತ್ತಾರೆಂದುಕೊಳ್ಳೋಣ. ಹೀಗಿರುವಾಗ ನಮ್ಮತನದ ಬೇರನ್ನು ನಾವು ಅರಸುವುದೇ ಪಾಪವೆನ್ನುವಂತಹ ನಿಲುವು ಸರಿಯೇ? ನಮ್ಮ ಸಂಸ್ಕೃತಿಯ ಅನನ್ಯತೆಯ ಬಗ್ಗೆ ಮಾತಾಡಿದರೆ ಅದೆಂತು ಸಂಸ್ಕೃತ ದ್ವೇಷವಾಗುವುದೋ ತಿಳಿಯದು. ಕರ್ನಾಟಕದಲ್ಲಿ ಪರಭಾಷಿಕರ ಪ್ರಾಬಲ್ಯದ ಬಗ್ಗೆ ಹೇಳಿರುವ ಮಾತೊಂದೇ ಇದ್ದುದ್ದರಲ್ಲಿ ಅರೆ ಸರಿಹೊಂದುವ ಮಾತು. ಆದರೂ ಭಾರತದ ಒಗ್ಗಟ್ಟನ್ನು ಆಂಗ್ಲರನ್ನು ತೋರಿಸಿ, ಚೀನೀಯರನ್ನು ತೋರಿಸಿ, ಪಾಕೀಸ್ತಾನಿಗಳನ್ನು ತೋರಿಸಿ, ಭಯೋತ್ಪಾದನೆಯನ್ನು ತೋರಿಸಿ... ಸಮಾನ ಶತೃತ್ವದ ಆಧಾರದ ಮೇಲೆ ಕಟ್ಟುವ ಹಾಗೂ ಉಳಿಸುವ ಪ್ರಯತ್ನಗಳನ್ನೇ ನಮ್ಮ ಸುತ್ತಮುತ್ತೆಲ್ಲಾ ಕಾಣುತ್ತಿರುವಾಗ, ಭೈರಪ್ಪನವರ ಈ ಅನಿಸಿಕೆ ಇನ್ನು ಹೇಗೆ ತಾನೇ ಇರಲು ಸಾಧ್ಯ ಅನ್ನಿಸದಿರದು. ಪ್ರಾದೇಶಿಕ ಚಿಂತನೆಗೆ ಕಾರಣ, ನಮ್ಮತನದ ಮೇಲೆ ನಡೆಯುವ ಭಾಷಾ, ಸಾಂಸ್ಕೃತಿಕ ಆಕ್ರಮಣಗಳಷ್ಟೇ ಅಲ್ಲಾ... ನಮ್ಮ ನಾಡು ಏಳಿಗೆ ಹೊಂದಬೇಕೆಂಬ ತುಡಿತವೇ ಮುಖ್ಯಕಾರಣವೆನ್ನುವುದನ್ನು ಭೈರಪ್ಪನವರೂ, ರಾ ಗಣೇಶರೂ ಗುರುತಿಸಿದ್ದರೆ ಚೆನ್ನಿತ್ತು.. ಒಟ್ಟಾರೆ ಶತಾವಧಾನಿಗಳ ಪ್ರಶ್ನೆಗೆ ಭೈರಪ್ಪನವರು ನೀಡಿರುವ ಉತ್ತರವು ನೇರವಾಗಿಲ್ಲದೆ ಕೊಂಕಣವನ್ನೆಲ್ಲಾ ಸುತ್ತಿಸಿ ಮೈಲಾರದ ಪಕ್ಕದೂರಿಗೆ ಕರೆತಂದು ನಿಲ್ಲಿಸಿದಂತಿದೆ.
ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಹಳ ಹಿರಿದಾದ ಸಾಧನೆಗೈದಿರುವ ಈ ಇಬ್ಬರು ಗೌರವಾನ್ವಿತ ಮಹನೀಯರ ಪ್ರಶ್ನೆ ಮತ್ತು ಉತ್ತರಗಳೆರಡನ್ನೂ ನೋಡಿದಾಗ ಒಟ್ಟಾರೆಯಾಗಿ ರಾಷ್ಟ್ರೀಯತೆ, ಭಾಷೆ, ಸಂಸ್ಕೃತಿಗಳ ಬಗ್ಗೆ ಇವರುಗಳು ಹೊಂದಿರುವ ನಿಲುವುಗಳು ಸರಿಯಿಲ್ಲದಿರುವುದು ಕಾಣುತ್ತದೆ. ಸತ್ಯದ ಹುಡುಕಾಟವೇ ಪರಮಗುರಿಯಾಗಿದೆ ಎನ್ನುವ ಈರ್ವರೂ ಈ ದಿಕ್ಕಿನಲ್ಲಿ ಮುಂದಾದರೂ ಯೋಚಿಸಿಯಾರು ಅಂದ್ಕೊಳ್ಳೋಣ... ಅಲ್ವಾ ಗುರೂ!

೧೪. ಈ ಹೊತ್ತು ಪ್ರಾದೇಶಿಕ ಭಾಷೆಗಳ, ಪ್ರಾಂತಗಳ ಮತ್ತು ಸಂಸ್ಕೃತಿಗಳ ಬಗೆಗೆ ಮಾತನಾಡುವುದು ಮನೋವೈಶಾಲ್ಯದ ಲಕ್ಷಣವೆನಿಸಿದೆ. ಆದರೆ ಭಾರತದ ಬಗ್ಗೆ ಮಾತನ್ನಾಡುವುದು ಸಂಕುಚಿತತೆ ಎನ್ನಿಸಿದೆ. ಏಕೆ?ಮೊದಲಿಗೆ, `ಭಾರತದಲ್ಲಿ ನಾನಾ ಭಾಷೆಗಳೂ, ಪ್ರಾಂತಗಳೂ ಇರುವುದು ಎಷ್ಟು ಸ್ಪಷ್ಟವಾಗಿದೆಯೋ ಅಂತೆಯೇ ನಾನಾ ಸಂಸ್ಕೃತಿಗಳಿರುವುದೂ ಸ್ಪಷ್ಟವಾಗಿದೆ' ಎಂಬುದನ್ನು ಗಣೇಶರು ಒಪ್ಪಿರುವುದು ಸಂತಸದ ವಿಷಯ. ಆದರೆ ತಮ್ಮ ಪ್ರಶ್ನೆಯಲ್ಲೇ ಪ್ರಾದೇಶಿಕತೆಯನ್ನು ಭಾರತೀಯತೆಗೆ ಎದುರಾಳಿಯಾಗಿ ನಿಲ್ಲಿಸಿರುವುದು, ಅವರಿಗೆ ಪ್ರಾಂತೀಯ ವಾದದ ಬಗ್ಗೆ ತಪ್ಪುಗ್ರಹಿಕೆ/ ಪೂರ್ವಾಗ್ರಹಗಳು ಇವೆಯೇನೋ ಎನ್ನಿಸುವಂತಿದೆ. ಯಾಕೆಂದರೆ, ‘ಪ್ರಾದೇಶಿಕತೆ ಬಗ್ಗೆ ಮಾತಾಡುವುದು ವಿಶಾಲ ಮನೋಭಾವನೆಯೆಂದಾಗಲೀ, ಭಾರತದ ಬಗ್ಗೆ ಮಾತಾಡುವುದು ಸಂಕುಚಿತತೆ ಎನ್ನುವುದಾಗಲೀ’ ಶ್ರೀಯುತರಿಗೆ ಮನವರಿಕೆಯಾದದ್ದು ಹೇಗೆಂದು ಅವರೇನೂ ತಿಳಿಸಿಲ್ಲ. ಆದರೂ ಅದೇ ದಿಟವೆನ್ನುವಂತೆ ಪ್ರಶ್ನೆ ಕೇಳಿ ಆ ಮೂಲಕ "ಪ್ರಾದೇಶಿಕವಾದವುಗಳ ಬಗ್ಗೆ ಮಾತನ್ನಾಡುವುದು ಭಾರತದ ಬಗ್ಗೆ ಮಾತನ್ನಾಡುವುದಕ್ಕೆ ವಿರೋಧವಾದದ್ದು" ಎನ್ನುವ ಮನೋಭೂಮಿಕೆಯನ್ನು ಓದುಗರಲ್ಲಿ ಹುಟ್ಟುಹಾಕಿ, ಅದಕ್ಕೆ ಕಾರಣವೇನು? ಎಂದು ಜಾಣ್ಮೆಯಿಂದ ಪ್ರಶ್ನೆಯನ್ನು ಕೇಳಿದ್ದಾರೆ ಮತ್ತು ಆ ಮೂಲಕ ಉತ್ತರದ ದಿಕ್ಕನ್ನೂ ನಿರ್ದೇಶಿಸಿದ್ದಾರೆ. ಇದು ಪ್ರಶ್ನೆಯಲ್ಲೇ ಉತ್ತರ ತುಂಬಿ ಕೇಳುವ ಕಲೆಯಾಗಿದೆಯಲ್ಲವೇ?
ಭೈರಪ್ಪನವರ ನಿಲುವು ಹುಟ್ಟು ಹಾಕಿದ ಪ್ರಶ್ನೆಗಳು!
ಭೈರಪ್ಪನವರು ಈ ಪ್ರಶ್ನೆಗೆ ಉತ್ತರಿಸುವಾಗ ಸ್ವಲ್ಪ ತಡವರಿಸಿ ಉತ್ತರವನ್ನು ಸುತ್ತಿ ಬಳಿಸಿ ನೀಡಲು ಯತ್ನಿಸಿರುವುದು ಕಾಣುತ್ತದೆ ಮತ್ತು ಈ ಉತ್ತರ ನೀಡುವ ಭರದಲ್ಲಿ ಅನೇಕ ತಪ್ಪು ಮಾಹಿತಿಗಳನ್ನು ನೀಡಿರುವುದು ತಿಳಿಯುತ್ತದೆ. ಹೇಗೆಂದು ನೋಡೋಣ...
ಈ ಭಾವನೆಯು ಪ್ರಧಾನವಾಗಿ ಡಿಎಂಕೆಯದು. ಮಹಾರಾಷ್ಟ್ರ, ಪಂಜಾಬ್, ಆಂಧ್ರ, ಗುಜರಾತುಗಳಲ್ಲಿಲ್ಲ.> ಭಾರತದ ಮೊದಲ ಭಾಷಾವಾರು ರಾಜ್ಯ ಆಂಧ್ರ. ಇಲ್ಲಿ ತೆಲುಗು ನುಡಿ, ನಾಡಿನ ಬಗ್ಗೆ ದನಿಯೆತ್ತಿ ೫೮ ದಿವಸ ಉಪವಾಸ ಮಾಡಿ ಪ್ರಾಣ ತೆತ್ತವರು ಶ್ರೀ ಪೊಟ್ಟಿ ಶ್ರೀರಾಮುಲು. ಮೂಲತಃ ಭಾರತದಲ್ಲಿ ಭಾಷಾವಾರು ಪ್ರಾಂತ್ಯಗಳ ರಚನೆಗೆ ಕಾರಣವಾದದ್ದೇ ಆಂಧ್ರದ ಈ ಚಳವಳಿ.
> ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕರನ್ನು ಕೇಂದ್ರವಾಗಿಸಿಕೊಂಡು ಹುಟ್ಟಿದ್ದು... ಶಿವಸೇನಾ. ಮರಾಠಿ ಕೇಂದ್ರಿತ ರಾಜಕೀಯ ಯುಗ ಆರಂಭವಾದದ್ದು ೧೯೬೬ರಲ್ಲೇ. ಮುಂದೆ ಅದು ಎಂ.ಇ.ಎಸ್, ಮಹಾರಾಷ್ಟ್ರಾ ನವನಿರ್ಮಾಣ ಸೇನೆಯ ಉದಯದವರೆಗೂ ಸಾಗಿ ಬಂದಿದೆ.
> ಪಂಜಾಬ್ ಪ್ರಾಂತ್ಯದಲ್ಲಿ ಖಲೀಸ್ಥಾನದ ಬೇಡಿಕೆ, ಆ ಒಂದು ರಕ್ತಸಿಕ್ತ ಹೋರಾಟದ ಚಳವಳಿ, ಆನಂದ್‌ಪುರ್ ಸಾಹೇಬ್ ನಿರ್ಣಯವಾದ ಪ್ರತ್ಯೇಕ ಖಾಲಿಸ್ತಾನದ ಘೋಷಣೆಯೂ ಪಂಜಾಬಿ ಪ್ರಾಂತೀಯತೆಯ ಅಭಿವ್ಯಕ್ತಿಗಳೇ ಅಲ್ಲವೇ?
> ತನ್ನದೇ ಆದ ನುಡಿ, ಸಂಸ್ಕೃತಿಗಳನ್ನು ಹೊಂದಿರುವ ಯಾವ ಪ್ರಾಂತ್ಯವೂ ತನ್ನ ಭಾಷೆ, ಸಂಸ್ಕೃತಿಗಳ ಬಗ್ಗೆ ಹೆಮ್ಮೆ ಪಟ್ಟುಕೊಳ್ಳುವುದನ್ನೂ, ತನ್ನ ಬೇರನ್ನು ಅದರಲ್ಲೇ ಗುರುತಿಸಿಕೊಳ್ಳುವುದನ್ನೂ ಬಿಡುವುದಿಲ್ಲಾ ಎನ್ನಲು ಕಟ್ಟಾ ರಾಷ್ಟ್ರೀಯವಾದದ ಬಿಜೆಪಿಯ ಗುಜರಾತಿನ ಮುಖ್ಯಮಂತ್ರಿಗಳಾದ ಶ್ರೀ ನರೇಂದ್ರಮೋದಿಯವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಳಸಿದ್ದ "ಗುಜರಾತಿ ಅಸ್ಮಿತಾ" ಘೋಷಣೆಯೇ ಸಾಕ್ಷಿಯಾಗಿದೆ. ಮತ್ತಿದು ಸರಿಯಾಗೂ ಇದೆ.
> ಬೆಂಗಾಲಿಗಳ ಭಾಷೆ ಸಂಸ್ಕೃತಿಗಳ ಅಭಿಮಾನವಂತೂ ವಿಶ್ವವಿಖ್ಯಾತ. ರವೀಂದ್ರನಾಥರ ಸೋನಾರ್ ಬಾಂಗ್ಲಾ ಆಗಲೀ, ಬಂಕಿಮರ ವಂದೆಮಾತರಂ ಆಗಲೀ ಬಂಗಾಳಿ ಸಂಸ್ಕೃತಿಯ ಅಭಿವ್ಯಕ್ತಿಯೇ ಅಲ್ಲವೇನು?
ಇವೆಲ್ಲಾ ಒಂದು ಕಡೆಯಿದ್ದು ಮತ್ತೊಂದೆಡೆ ಪ್ರಾದೇಶಿಕ ಚಿಂತನೆಗಿಂತಾ ಮಿಗಿಲಾಗಿ ರಾಷ್ಟ್ರೀಯತೆಯ ಚಿಂತನೆಯೊಂದಿಗೇ ಕೈಗೂಡಿಸಿದ ಕನ್ನಡನಾಡಿನಲ್ಲಿ ಪ್ರಾದೇಶಿಕ ಚಿಂತನೆ ಮೂಡುವುದರ ಬಗ್ಗೆ ಗಣೇಶ್ ಮತ್ತು ಭೈರಪ್ಪನವರು ಎತ್ತಿದ ಆಕ್ಷೇಪದ ಮಾತುಗಳೇಕೋ ಉಚಿತವಾದುದಲ್ಲ ಅನ್ನಿಸುತ್ತದೆ. ಗಮನಿಸಿ ನೋಡಿ, ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದವರಲ್ಲಿ ಹೆಚ್ಚಿನವರೆಲ್ಲಾ ಈ ಮೇಲಿನ ಪ್ರದೇಶಗಳ ಜನರೇ ಆಗಿದ್ದಾರೆ. ಹಾಗಾದರೆ ಪ್ರಾದೇಶಿಕ ಚಿಂತನೆ ರಾಷ್ಟ್ರೀಯತೆಗೆ ಮಾರಕವಾಗುವುದಾದರೂ ಹೇಗೆ? ಕನ್ನಡಿಗರಿಗೆ ಕರ್ನಾಟಕತ್ವ ಎನ್ನುವುದೇ ಭಾರತೀಯತೆ ಅಲ್ಲವೇ? ಆಲೂರು ವೆಂಕಟರಾಯರ ಮಾತು "ಕರ್ನಾಟಕಾಂತರ್ಗತ ಭಾರತಮಾತೆ" ಎನ್ನುವುದನ್ನು ಅರಿತರೆ ಪ್ರಾದೇಶಿಕತೆ ಮತ್ತು ಭಾರತೀಯತೆಗಳೆರಡೂ ಒಂದೇ ಎನ್ನುವುದು ಅರಿವಾಗುತ್ತದೆ.
ಮುಂದುವರೆಯುತ್ತಾ ಭೈರಪ್ಪನವರು ಈ ಭಾವನೆಗೆ ಕಾರಣವನ್ನು ಸಂಸ್ಕೃತ ದ್ವೇಷ/ ವೇದದೆಡೆಗಿನ ದ್ವೇಷ/ ಪರಭಾಷಿಕರ ಪ್ರಾಬಲ್ಯಗಳಿಗೆ ಆರೋಪಿಸುತ್ತಾರೆ. ಆಂಗ್ಲರು ಭಾರತವನ್ನು ಒಡೆಯಲು ಬಳಸಿದ್ದ ತಂತ್ರಗಳ ಫಲ ಎಂದಿದ್ದಾರೆ. ವೈಜ್ಞಾನಿಕವಾಗಿ ಭಾಷಾ ವಿಜ್ಞಾನಿಗಳು ಗುರುತಿಸಿರುವ ದಿಟವಾದ ‘ಕನ್ನಡದ ಬೇರುಗಳು ಸಂಸ್ಕೃತದಲ್ಲಿಲ್ಲ’ ಎಂಬುದನ್ನು ಶ್ರೀಯುತರೂ ಒಪ್ಪುತ್ತಾರೆಂದುಕೊಳ್ಳೋಣ. ಹೀಗಿರುವಾಗ ನಮ್ಮತನದ ಬೇರನ್ನು ನಾವು ಅರಸುವುದೇ ಪಾಪವೆನ್ನುವಂತಹ ನಿಲುವು ಸರಿಯೇ? ನಮ್ಮ ಸಂಸ್ಕೃತಿಯ ಅನನ್ಯತೆಯ ಬಗ್ಗೆ ಮಾತಾಡಿದರೆ ಅದೆಂತು ಸಂಸ್ಕೃತ ದ್ವೇಷವಾಗುವುದೋ ತಿಳಿಯದು. ಕರ್ನಾಟಕದಲ್ಲಿ ಪರಭಾಷಿಕರ ಪ್ರಾಬಲ್ಯದ ಬಗ್ಗೆ ಹೇಳಿರುವ ಮಾತೊಂದೇ ಇದ್ದುದ್ದರಲ್ಲಿ ಅರೆ ಸರಿಹೊಂದುವ ಮಾತು. ಆದರೂ ಭಾರತದ ಒಗ್ಗಟ್ಟನ್ನು ಆಂಗ್ಲರನ್ನು ತೋರಿಸಿ, ಚೀನೀಯರನ್ನು ತೋರಿಸಿ, ಪಾಕೀಸ್ತಾನಿಗಳನ್ನು ತೋರಿಸಿ, ಭಯೋತ್ಪಾದನೆಯನ್ನು ತೋರಿಸಿ... ಸಮಾನ ಶತೃತ್ವದ ಆಧಾರದ ಮೇಲೆ ಕಟ್ಟುವ ಹಾಗೂ ಉಳಿಸುವ ಪ್ರಯತ್ನಗಳನ್ನೇ ನಮ್ಮ ಸುತ್ತಮುತ್ತೆಲ್ಲಾ ಕಾಣುತ್ತಿರುವಾಗ, ಭೈರಪ್ಪನವರ ಈ ಅನಿಸಿಕೆ ಇನ್ನು ಹೇಗೆ ತಾನೇ ಇರಲು ಸಾಧ್ಯ ಅನ್ನಿಸದಿರದು. ಪ್ರಾದೇಶಿಕ ಚಿಂತನೆಗೆ ಕಾರಣ, ನಮ್ಮತನದ ಮೇಲೆ ನಡೆಯುವ ಭಾಷಾ, ಸಾಂಸ್ಕೃತಿಕ ಆಕ್ರಮಣಗಳಷ್ಟೇ ಅಲ್ಲಾ... ನಮ್ಮ ನಾಡು ಏಳಿಗೆ ಹೊಂದಬೇಕೆಂಬ ತುಡಿತವೇ ಮುಖ್ಯಕಾರಣವೆನ್ನುವುದನ್ನು ಭೈರಪ್ಪನವರೂ, ರಾ ಗಣೇಶರೂ ಗುರುತಿಸಿದ್ದರೆ ಚೆನ್ನಿತ್ತು.. ಒಟ್ಟಾರೆ ಶತಾವಧಾನಿಗಳ ಪ್ರಶ್ನೆಗೆ ಭೈರಪ್ಪನವರು ನೀಡಿರುವ ಉತ್ತರವು ನೇರವಾಗಿಲ್ಲದೆ ಕೊಂಕಣವನ್ನೆಲ್ಲಾ ಸುತ್ತಿಸಿ ಮೈಲಾರದ ಪಕ್ಕದೂರಿಗೆ ಕರೆತಂದು ನಿಲ್ಲಿಸಿದಂತಿದೆ.
ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಹಳ ಹಿರಿದಾದ ಸಾಧನೆಗೈದಿರುವ ಈ ಇಬ್ಬರು ಗೌರವಾನ್ವಿತ ಮಹನೀಯರ ಪ್ರಶ್ನೆ ಮತ್ತು ಉತ್ತರಗಳೆರಡನ್ನೂ ನೋಡಿದಾಗ ಒಟ್ಟಾರೆಯಾಗಿ ರಾಷ್ಟ್ರೀಯತೆ, ಭಾಷೆ, ಸಂಸ್ಕೃತಿಗಳ ಬಗ್ಗೆ ಇವರುಗಳು ಹೊಂದಿರುವ ನಿಲುವುಗಳು ಸರಿಯಿಲ್ಲದಿರುವುದು ಕಾಣುತ್ತದೆ. ಸತ್ಯದ ಹುಡುಕಾಟವೇ ಪರಮಗುರಿಯಾಗಿದೆ ಎನ್ನುವ ಈರ್ವರೂ ಈ ದಿಕ್ಕಿನಲ್ಲಿ ಮುಂದಾದರೂ ಯೋಚಿಸಿಯಾರು ಅಂದ್ಕೊಳ್ಳೋಣ... ಅಲ್ವಾ ಗುರೂ!
ಟ್ವಿಟರ್ ನಲ್ಲಿ
ಫೇಸ್ಬುಕ್ ನಲ್ಲಿ